Home ಅಪರಾಧ ಲೋಕ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿಗೆ ನ್ಯಾಯಾಂಗ ಬಂಧನ

0

ಬೆಳ್ತಂಗಡಿ; ಮೇಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತದ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು 15ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮೇಲಂತಬೆಟ್ಟುವಿನಲ್ಲಿ ಪೊಲೀಸರ ದಾಳಿಯ ವೇಳೆ ಸ್ಥಳದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದವು. ಅಕ್ರಮ ಸ್ಪೋಟಕ ದಾಸ್ತಾನು ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಶಶಿರಾಜ ಶೆಟ್ಟಿ ಯನ್ನು ಬಂಧಿಸಿದ್ದರು. ಆರೋಪಿಯನ್ನು ಇದೀಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು
ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿ ಬಿಜೆಪಿ ಮುಖಂಡ ಪ್ರಮೋದ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ

ಶಾಸಕರ ಪ್ರಯತ್ನ ವಿಫಲ;
ಶಶಿರಾಜ್ ಶೆಟ್ಟಿ ಅವರನ್ನು ರಾತ್ರಿ ಪೊಲೀಸರು ಬಂಧಿಸಿದ ಬೆನ್ನಲ್ಲಿಯೇ ಶಾಸಕ ಹರೀಶ್ ಪೂಂಜ ಅವರು ಬೆಂಬಲಿಗರೊಂದಿಗೆ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಯನ್ನು ಹೊರತರುವ ಪ್ರಯತ್ನ ನಡೆಸಿದ್ದರು. ಠಾಣೆಯಮುಂದೆ ಧರಣಿ ನಡೆಸಿ ಪೊಲೀಸರ ಮೇಲೆ ಒತ್ತಡ ಹಾಕಲಾಗಿತ್ತು ಆದರೆ ಯಾವುದೇ ಒತ್ತಡಗಳಿಗೆ ಮಣಿಯದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ

NO COMMENTS

LEAVE A REPLY

Please enter your comment!
Please enter your name here

Exit mobile version