ಪದ್ಮುಂಜ: ಆಟೊ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ರವಿವಾರ ರಾತ್ರಿ ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ.
ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತಪಟ್ಟವರು.
ಪದ್ಭುಂಜಕ್ಕೆ ಬಾಡಿಗೆಗೆಂದು ತೆರಳಿದ ಇವರ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ
ದಿನೇಶ್ ಗಂಭೀರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಆಟೊ ರಿಕ್ಷಾ ಚಾಲನೆಯೊಂದಿಗೆ ಉಪ್ಪಿನಂಗಡಿಯ
ಸಹಕಾರಿ ಬ್ಯಾಂಕೊಂದರಲ್ಲಿ ಫಿಗ್ಗಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಾ ಎಲ್ಲರಿಗೂ ಚಿರಪರಿಚಿತರಾಗಿದ್ದರು.
ರಿಕ್ಷಾದಲ್ಲಿ ಎರಡು ಮಕ್ಕಳು ಹಾಗೂ ಅವರ ತಂದೆ ಪ್ರಯಾಣಿಕರಾಗಿದ್ದು, ಅವರು ಅಲ್ಪಸ್ವಲ್ಪ ತರಚಿದ ಗಾಯದಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅವಿವಾಹಿತರಾಗಿರುವ ಮೃತ ದಿನೇಶ್ ತಾಯಿ, ಓರ್ವ ಸಹೋದರನನ್ನು ಆಗಲಿದ್ದಾರೆ.