ಬೆಳ್ತಂಗಡಿ, ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರೋದನ್ನು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಶಾಸಕರ ಮೇಲೆ ಕೇಸ್ ಹಾಕಿರೋದನ್ನು ಖಂಡಿಸಿ ಸೋಮವಾರ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮೇ.20 ರಂದು ಬೆಳಗ್ಗೆ ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಮಿನಿ ವಿಧಾನಸೌಧದ ಬಳಿ ಸಾಗಿ ಅಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ಹೇಳಿದೆ.
