Home ಅಪರಾಧ ಲೋಕ ಪೊಲೀಸರಿಗೆ ಜೀವ ಬೆದರಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು

ಪೊಲೀಸರಿಗೆ ಜೀವ ಬೆದರಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು

1011
0

ಬೆಳ್ತಂಗಡಿ; ಪೊಲೀಸ್ ಜಾಲಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರೌಡಿ ಶೀಟರ್ ಶಶಿರಾಜ್ ಶೆಟ್ಟಿಯ ಬಂಧನ ವಿರೋಧಿಸಿ ಬೆಳ್ತಂಗಡಿ ವಿಕಾಸ ಸೌಧದ ಎದುರು ಸೋಮವಾರ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಇಲಾಖೆಯಿಂದ ಯಾವುದೇ ಅನುನತಿ ಪಡೆಯದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಲಾಗಿತ್ತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಇತರರು ಜನರನ್ನು ಗುಂಪು ಸೇರಿಸಿ ಪ್ರತಿಭಟನಾಸಭೆ ನಡೆಸಿರುವಬಗ್ಗೆ ಹಾಗೂ ಈ ಪ್ರತಿಭಟನಾ ಸಭೆಯಲ್ಲಿ ಹರೀಶ್ ಪೂಂಜ ಅವರು ಪ್ರಸ್ತುತ ಅರೆಸ್ಟ್ ಆಗಿರುವ ಕಾರ್ಯಕ ರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದನರಂದು ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ ಕೆ.ಜೆ ಹಳ್ಳಿ ಯ ಪೊಲೀಸ್ ಠಾಣೆಗಳಿಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಸಾರ್ವಜನಿಕ ನೌಕರರಾದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಾಗೂ ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿರುತ್ತಾರೆ. ಎಂದು ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 58/2024 ಕಲಂ 143, 147, 34 , 504, 506, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ. ಎಂದು ಪೊಲೀಸ್ ವರಿಷ್ಠಾಧಿಕಾರಿ ಯವರು ಮಾಹಿತಿ ನೀಡಿದ್ದಾರೆ

LEAVE A REPLY

Please enter your comment!
Please enter your name here