Home ಬ್ರೇಕಿಂಗ್‌ ನ್ಯೂಸ್ ಕಲ್ಲಿನಕೋರೆ ಪ್ರಕರಣ ಶಶಿರಾಜ್ ಶೆಟ್ಟಿ ಮೂರು ದಿನ ಪೊಲೀಸ್ ಕಸ್ಟಡಿಗೆ: ಅನಾರೂಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು

ಕಲ್ಲಿನಕೋರೆ ಪ್ರಕರಣ ಶಶಿರಾಜ್ ಶೆಟ್ಟಿ ಮೂರು ದಿನ ಪೊಲೀಸ್ ಕಸ್ಟಡಿಗೆ: ಅನಾರೂಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು

486
0

ಬೆಳ್ತಂಗಡಿ; ಅಕ್ರಮ‌ಗಣಿಗಾರಿಕೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಮೂರುದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.
ಕಳೆದ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಪೊಲೀಸರ ಸಹಕಾರದೊಂದಿಗೆ ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ ನಡೆಸಿ ಸ್ಥಳದಿಂದ‌ ಸ್ಪೋಟಕಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ಪ್ರಮುಖ‌ಆರೋಪಿ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯವು ಶಶಿರಾಜ್ ಶೆಟ್ಟಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗಾಗಿ ಪೊಲೀಸರು ಪ್ರಮುಖ ಆರೋಪಿ ಶೆಟ್ಟಿ ಅವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಅತ್ಯಂತ ಬಿಗುವಿನ ಭದ್ರತೆಯೊಂದಿಗೆ ಶಶಿರಾಜ್ ಶೆಟ್ಟಿ ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಸ್ಪೋಟಕಗಳು ಇಲ್ಲಿ ಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಸ್ಪೋಟಕದ ಮೂಲದ ಬಗ್ಗೆ, ಸ್ಥಳದಲ್ಲಿ ಸ್ಪೋಟ ನಡೆಸುತ್ತಿದ್ದವರ ಬಗ್ಗೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ತನಿಖೆ ನಡೆಸಲು ಇದೀಗ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಸಕ ಹರೀಶ್ ಪೂಂಜ ಅವರು ಠಾಣೆಗೆ ನುಗ್ಗಿ ನಡೆಸಿದ ಪ್ರತಿಭಟನೆಯ ಹಿನ್ನಲೆಯಲ್ಲಿ ಈ ಪ್ರಕರಣ‌ ರಾಜ್ಯದ ಗಮನ ಸೆಳೆದಿತ್ತು. ಇದೀಗ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪ್ರಮೋದ ನಿಗಾಗಿ‌ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಶಶಿರಾಜ್ ಶೆಟ್ಟಿ ಆಸ್ಪತ್ರೆಗೆ ದಾಖಲು;
ಬೆಳ್ತಂಗಡಿ ಪೊಲೀಸರು ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಲಯದಿಂದ ವಶಕ್ಕೆ ಪಡೆದ ಬಳಿಕ ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ತಪಾಸಣೆಯ ವೇಳೆ ಶಶಿರಾಜ್ ಶೆಟ್ಟಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ‌ ಹಿನ್ನಲೆಯಲ್ಲಿ ಅವರನ್ನು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here