ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು.
ಸಚಿವರುಗಳಾದ ಮಹಾದೇವಪ್ರಸಾದ್, ಬೈರತಿ ಸುರೇಶ್, ಶಾಸಕ ಅಶೋಕ ರೈ ಹರೀಶ್ ಕುಮಾರ್, ಮಾಜಿಶಾಸಕರುಗಳಾದ ರಮಾನಾಥ ರೈ, ಶಕುಂತಲಾ ಶೆಟ್ಟಿ, ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಕ್ಷದ ಮುಳಂಡರುಗಳು ಇದ್ದರು.