ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ
ಆರೋಪದಡಿ ಬೆಳ್ತಂಗಡಿ ಪೊಲೀಸರಿಂದ ಬಂಧಿತರಾಗಿರುವ ಯುವ ಮೋರ್ಚಾ ತಾಲೂಕು ಅಧ್ಯಕ್ಷ
ಶಶಿರಾಜ್ ಶೆಟ್ಟಿಯವರ ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 29ರ ಮಧ್ಯಾಹ್ನದವರೆಗೆ ವಿಸ್ತರಿಸಿ ಬೆಳ್ತಂಗಡಿ ನ್ಯಾಯಲಯವು ಆದೇಶ ಹೊರಡಿಸಿದೆ.
ಬಂಧನಕ್ಕೊಳಗಾಗಿದ್ದ ಬಳಿಕ ಕಳೆದ ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯವು ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು ಆದರೆ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಶಿರಾಜ್ ಶೆಟ್ಟಿ ಅವರನ್ನು ಮೇ 27ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ವೇಳೆ ನ್ಯಾಯಾಧೀಶ ಸಂದೇಶ್ ಅವರು ಮೇ 29 ರ ವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮೇ 29 ರಂದು ಮಧ್ಯಾಹ್ನ ಆರೋಪಿಯನ್ನು ನ್ಯಾಯಾಲಯಕ್ಕೆಹಾಜರುಪಡಿಸುವಂತೆ ಸೂಚಿಸಿದರು.