Home ಸ್ಥಳೀಯ ಸಮಾಚಾರ ಬೆಳ್ತಂಗಡಿಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ

0

ಬೆಳ್ತಂಗಡಿ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಹಾಗೂ ಕಾರ್ಮಿಕ ಇಲಾಖೆ ಇವರ ಜಂಟಿ ಆಶಯದಲ್ಲಿ ಮೇ 30 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಮಹತ್ವ ಮತ್ತು ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಇದರ ನ್ಯಾಯಾಧೀಶರಾದ ವಿಜಯೇಂದ್ರ ಟಿಎಸ್ ನಾವು ಮೇ ತಿಂಗಳಲ್ಲಿ ಕಾರ್ಮಿಕರ ಹಕ್ಕುಗಳ‌ಬಗ್ಗರ ಜಾಗೃತರಾಗುವುದರೊಂದಿಗೆ ವಿಶ್ವ ತಂಬಾಕು ನಿಷೇಧ ದಿನಾಚರಣೆ ವಿಷಯದ ಬಗ್ಗೆ ನಾವುಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಇದರ ಬಗ್ಗೆ ಜನಸಾಮಾನ್ಯರು ಕಾರ್ಮಿಕರು ರೈತರ ಜೊತೆ ತಂಬಾಕು ಸೇವನೆಯಿಂದ ಆಗುವ ತೊಂದರೆಯ ಬಗ್ಗೆ ಮನವರಿಕೆ ಮಾಡುವ ಕೆಲಸವನ್ನು ಪ್ರತಿಯೊಂದು ಮನೆಯಲ್ಲಿ ಕೂಡ ಅರಿವು ಮೂಡಿಸಬೇಕು ಆಮೂಲಕ ಮುಂದಿನ ಆರೋಗ್ಯ ಪೂರ್ಣ ಸಮಾಜ ಕಟ್ಟಲು ಸಹಕರಿಸಬೇಕು ಅದೇ ರೀತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಈಗಿರುವ ಕೆಲವೊಂದು ತಾಂತ್ರಿಕ ದೋಷ ಮತ್ತು ಸಹಾಯಧನಗಳ ವಿಳಂಬ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜೊತೆ ಪ್ರಶ್ನಿಸಿ ಅದರ ಜಾರಿಗಾಗಿ ಪ್ರಯತ್ನ ಮಾಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಇಲಾಖೆಯ ಅಧಿಕಾರಿ ಹರೀಶ್ ಎಸ್ಎನ್ ಕಾರ್ಮಿಕ ದಿನಾಚರಣೆಯ ಮಹತ್ವದ ಬಗ್ಗೆ ಮಾತಾಡಿದರು ಕಾರ್ಮಿಕರ ಪ್ರಶ್ನೆಗಳಿಗೆ ಪೂರಕವಾಗಿ ಉತ್ತರ ನೀಡಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಮಾತನಾಡಿ ತಂಬಾಕು ಸೇವನೆಯು ಜನಸಾಮಾನ್ಯರನ್ನು ಎಷ್ಟು ಆವರಿಸಿಕೊಂಡು ಅವರ ಬದುಕನ್ನು ಹಾಳು ಮಾಡುತ್ತಿದೆ ಎಂಬುದನ್ನು ವಿವರವಾಗಿ ಹೇಳಿದರು ಅದೇ ರೀತಿ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ನಾವು ಕೂಡ ಅದರ ಪರಿಹಾರಕ್ಕಾಗಿ ಪ್ರಯತ್ನ ಪಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಬೆಳ್ತಂಗಡಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ ಮಾತನಾಡಿ ಶುಭ ಹಾರೈಸಿದರು. ಸಭೆಯಲ್ಲಿ ಹಿರಿಯ ವಕೀಲರಾದ ಶಿವಕುಮಾರ ಎಸ್ ಎಂ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿಶ್ವ ಕಾರ್ಮಿಕ ದಿನಾಚರಣೆ ವಿಶ್ವ ತಂಬಾಕು ನಿಷೇಧ ದಿನ ಹಾಗೂ ಕಾನೂನು ಅರಿವು ಕಾರ್ಯಕ್ರಮ ಇತ್ಯಾದಿ ವಿಷಯಗಳ ಬಗ್ಗೆ ವಿವರ ನೀಡಿದರು.


ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಇದರ ಅಧ್ಯಕ್ಷರಾದ ವಸಂತ ನಡ ಇವರು ಕಟ್ಟಡ ಕಾರ್ಮಿಕರಿಗೆ ಇತ್ತೀಚಿನ ದಿನಗಳಲ್ಲಿ ಆಗಿರುವ ತಾಂತ್ರಿಕ ಸಮಸ್ಯೆಗಳಿಂದಾಗಿ ಕಟ್ಟಡ ಕಾರ್ಮಿಕರ ವಿದ್ಯಾರ್ಥಿ ವೇತನ ಮಾಡುವೆ ಸಹಾಯಧನ ಇತ್ಯಾದಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಈ ಬಗ್ಗೆ ಮನವಿಯನ್ನು ತಾಲೂಕು ಕಾನೂನು ಸೇವಗಳ ಪ್ರಾಧಿಕಾರಕ್ಕೆ ,ಹಾಗೂ ಕಾರ್ಮಿಕ ಇಲಾಖೆಯ ಬಳಿ ಮನವಿಯನ್ನು ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಕೆ.ವಿ ಸಭೆಯಲ್ಲಿ ಉಪಸ್ಥಿತರಿದ್ದರು ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ ಸ್ವಾಗತಿಸಿ ವಸಂತ್ ನಡ ವಂದಿಸಿದರು, ಕೋರ್ಟ್ ಸಿಬ್ಬಂದಿಯವರಾದ ಯಲ್ಲಪ್ಪ ಮತ್ತು ಇತರ ಸಿಬ್ಬಂದಿಗಳು, ಸ್ಪಂದನ ಕಟ್ಟಡ ಕಾರ್ಮಿಕ ಸಂಘದ ಸಿಬ್ಬಂದಿಗಳು ಮೀನಾ, ಕಿರಣ್ ಕುಮಾರ್ ನಾರಾಯಣ ಪೂಜಾರಿ, ಪದಾಧಿಕಾರಿಗಳು ಮತ್ತು ಇತರ ಕಾರ್ಮಿಕರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version