Home ಬ್ರೇಕಿಂಗ್‌ ನ್ಯೂಸ್ ಕಳೆಂಜದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್ ವಿರುದ್ಧ...

ಕಳೆಂಜದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ

0
260

ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಅಕ್ರಮ ತೆರವಿಗೆ ಯತ್ನಿಸಿದ ವೇಳೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಇದೀಗ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣದ ಹಿನ್ನಲೆ

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು ಇದರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಕಾರ್ಯಕರ್ತರು ಮನೆ ನಿರ್ಮಾಣ ಮಾಡಿದ್ದರು ನಂತರ ಅರಣ್ಯ ಇಲಾಖೆ ಮನೆಯನ್ನು ತೆರವು ಮಾಡಲು 9-10-2023 ರಂದು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರರು ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಶಾಸಕರುಗಳ ನಡುಗೆ ದೊಡ್ಡ ಗಲಾಟೆಯೇ ನಡೆದಿತ್ತು.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಎಂಬವರ ದೂರು ನೀಡಿದ್ದರು‌ ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ದೋಷರೋಪ ಪಟ್ಟಿ ಸಲ್ಲಿಕ್ಕೆ: ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರ 15 ಜನ ಸೇರಿ ಒಟ್ಟು 17 ಮಂದಿ ವಿರುದ್ಧ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1 ರಂದು ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ.

ಶಾಸಕರ ವಿರುದ್ದ ಮೂರನೇ ಚಾರ್ಜ್ ಶೀಟ್:
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ದ ಇದೀಗ ಮೂರನೆಯ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಬೆಳ್ತಂಗಡಿಯಲ್ಲಿ ಅಕ್ರಮ ಕಲ್ಲುಬಕೋರೆ ಆರೋಪಿಗಳ ಬಂಧನ ಹಾಗೂ ಬಳಿಕ ಠಾಣೆಯಲ್ಲಿ ನಡೆದ ಗಲಾಟಯಬಗ್ಗೆ ಹಾಗೂ ಬಳಿಕ ಪರವಾನಿಗೆಯಿಲ್ಲದೆ ನಡೆದ ಪ್ರತಿಭಟನೆ ಹಾಗೂ ಪೊಲೀಸರಿಗೆ ನಿಂದಿಸಿದ ಬೆದರಿಕೆಯೊಡ್ಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

NO COMMENTS

LEAVE A REPLY

Please enter your comment!
Please enter your name here