ಬೆಳ್ತಂಗಡಿ: ಕಾಯರ್ತಡ್ಕದಲ್ಲಿ ಬಿಜೆಪಿ ಮುಖಂಡ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬಾತನ ಮೇಲೆ ತಲವಾರು ದಾಳಿ ನಡೆದಿದ್ದು ಗಂಭೀರವಾಗಿ ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಯರ್ತಡ್ಕ ಕಜೆ ನಿವಾಸಿ ಕಾಂಗ್ರೆಸ್ ಮುಖಂಡ ಗ್ರಾ.ಪಂ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಸಂಜೆ ತನ್ನ ಅಂಗಡಿ ಮುಚ್ಚಿ ರಾಜೇಶ್ ಹೋಗುತ್ತಿದ್ದವೇಳೆ ಇವರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ರಾಜೇಶ್ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದ್ದು ಆಸ್ಪತ್ರೆಗೆ ದಾಖಲಾಗಿರುವ ಇವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.
