ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ ಬಲಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
