Home ಅಪರಾಧ ಲೋಕ ಕಳೆಂಜ ಬಿಜೆಪಿ ಮುಖಂಡನ ಕೊಲೆ‌ ಯತ್ನ ಪ್ರಕರಣ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ

ಕಳೆಂಜ ಬಿಜೆಪಿ ಮುಖಂಡನ ಕೊಲೆ‌ ಯತ್ನ ಪ್ರಕರಣ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ

390
0

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಲಪ್ಪ ಗೌಡ ಕಜೆ(48) ಎಂಬಾತನು ರಾಜೇಶ್ ಎಮ್.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ‌ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಜೇಶ್.ಎಮ್.ಕೆ ನೀಡಿದ ದೂರಿನ ಮೇರೆಗೆ ಆರೋಪಿ ಕುಶಲಪ್ಪ ಗೌಡನ ವಿರುದ್ಧ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here