ಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಕೇಸುಗಳನ್ನು ದಾಖಲಿಸುವ ಮೂಲಕ ದೈಹಿಕ ದಾಳಿ ನಡೆಸುವ ಮೂಲಕ ಭಯದ ವಾತಾವರಣ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀ ನಿವಾಸ ರಾವ್ ಆರೋಪಿಸಿದ್ದರೆ.
ಬೆಳ್ತಂಗಡಿ ಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯುವ ಮೋರ್ಚಾ ಅಧ್ಯಕ್ಷನ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು. ಅದನ್ನು ಪ್ರಶ್ನಿಸಿದ ಶಾಸಕರ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಿ ಅವರನ್ನು ಬಂಧಿಸುವ ನಾಟಕ ಇದೀಗ ಕಳೆಂಜದಲ್ಲಿ ಎಸ್.ಟಿ ಮೋರ್ಚಾ ಅಧ್ಯಕ್ಷನ ಮೇಲೆ ನಡೆದ ಕೊಲೆಯತ್ನ ಪ್ರಕರಣಗಳು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಇದೀಗ ಕಳೆಂಜದಲ್ಲಿ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಅವರ ಮೇಲೆ ಕೊಲೆಯತ್ನನಡೆದಿರುವ ಬೆನ್ನಲ್ಲಿಯೇ ಅವರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸುವ ಪ್ರಯತ್ನಗಳು ನಡೆದಿದೆ ಇದು ಖಂಡನೀಯವಾಗಿದೆ ಎಂದರು.
ಬೆಳ್ತಂಗಡಿ ಯಲ್ಲಿ ಈ ಹಿಂದೆ ಎಂದಿಗೂ ಕಂಡಿರದ ರೀತಿಯಲ್ಲಿ ದ್ವೇಷದ ರಾಜಕೀಯ ನಡೆಯುತ್ತಿದೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದರು.
ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ದಿನ ಕಳಂಜದಲ್ಲಿ ಬಿಜೆಪಿ ವಿಜಯೋತ್ಸವ ಕುಶಾಲಪ್ಪ ಗೌಡರ ಮನೆಯ 100 ಮೀಟರ್ ಅಂತರದ ಆಸುಪಾಸಿನ ರಸ್ತೆಯಲ್ಲಿ ನಡೆದಿರುವುದು. ಅಲ್ಲಿಗೆ ಕುಶಾಲಪ್ಪ ಗೌಡ ಏಕಾಏಕಾಗಿ ಬಂದು ಬೆದರಿಕೆ ಹಾಕಿ ರಾಜೇಶ್ ಗೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿ ಕೊಲೆಯ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ ಅವರು
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಹಲವು ಶಾಸಕರು ಸೇವೆ ಸಲ್ಲಿಸಿದರು ಉತ್ತಮ ರೀತಿಯಲ್ಲಿ ಸೇವಾ ಕಾರ್ಯ ನಡೆಸಿದ್ದಾರೆ. ಆದರೆ 2023ರಿಂದ ತಾಲೂಕಿನಲ್ಲಿ ರಾಜಕೀಯ ವೈಷಮ್ಯದಿಂದ ಕೀಳು ಮಟ್ಟದ ರಾಜಕೀಯ ನಡೆಯುತ್ತಿದೆ.
ಕುಶಾಲಪ್ಪ ಗೌಡರವರು ಕಾಂಗ್ರೆಸ್ ಕಾರ್ಯಕರ್ತನಾಗಿ ಕಳೆದ ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ದುಡಿದಿದ್ದಾರೆ. ಅವರು ಕಾಂಗ್ರೆಸ್ ಕಾರ್ಯಕರ್ತ ಅಲ್ಲ ಎಂದು ಹೇಳುವುದು ಸುಳ್ಳು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು
