ಬೆಳ್ತಂಗಡಿ: ವಿಧಾನಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮೊದಲನೇ ಪ್ರಾಶಸ್ತ್ರದ ಮತಗಳ ಎಣಿಕೆಯಲ್ಲಿಯೇ ಭಾರೀ ಅಂತರದಿಂದ ಗೆಲುವನ್ನು ಗಳಿಸಿದ್ದಾರೆ.
ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಒಳಗೊಂಡಂತಿರುವ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಶಿವಮೊಗ್ಗ ವಿನೋಭನಗರದ ಡಾ.ಧನಂಜಯ ಸರ್ಜಿಯವರು 19,973 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಒಟ್ಟು 37,627 ಮತಗಳಿಸಿದ ಡಾ. ಧನಂಜಯ ಸರ್ಜಿಯವರು ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು 13,516 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಜೆಪಿ ಮುಖಂಡ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ 7,039 ಮತಗಳು ಲಭಿಸಿದೆ ಮತ್ತೋರ್ವ ಪಕ್ಷೇತರ ಅಭ್ಯರ್ಥಿ ಎಸ್.ಪಿ ದಿನೇಶ್ ಅವರಿಗೆ 2,203 ಮತಗಳು ಲಭಿಸಿದೆ.