Home ಕ್ರೀಡಾ ಸಮಾಚಾರ ಮುಂಡಾಜೆಯ ತೇಜಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮುಂಡಾಜೆಯ ತೇಜಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

505
0

ಬೆಳ್ತಂಗಡಿ: ದಿನಾಂಕ 06 .06 .2024 ರಿಂದ 07.06.2024 ರವರೆಗೆ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜರಕಾಡುವಿನಲ್ಲಿ ನಡೆದ ರಾಜ್ಯಮಟ್ಟದ ಸೀನಿಯರ್ ಮತ್ತು ಯೂತ್ ಮೀಟ್-2024 ಇದರಲ್ಲಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.

ಈಗಾಗಲೇ ಹಲವು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದಿರುವ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಅನುಭವವನ್ನು ಹೊಂದಿರುತ್ತಾರೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿಯಾಗಿರುವ ರಾಜೇಶ್ ಕೆ . ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುವ ತೇಜಲ್ ಕೆ .ಆರ್ ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ತರಬೇತುದಾರರಾಗಿರುವ ಶಾಂತಾರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದು ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಯಾಗಿದ್ದಾರೆ.

LEAVE A REPLY

Please enter your comment!
Please enter your name here