ಬೆಳ್ತಂಗಡಿ; ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ನಡೆಸಿದ ಪ್ರತಿಭಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಏಪ್ರಿಲ್ 22ರಂದು ಉಜಿರೆಯಲ್ಲಿ ಅನುಮತಿಯನ್ನು ಪಡೆಯದೆ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುಂಪು ಸೇರಲಾಗಿದೆ. ಜೊತೆಗೆ ಅನುಮತಿಯನ್ನು ಪಡೆದಿಲ್ಲ ಎಂದು ವಿದ್ಯಾರ್ಥಿ ನಾಯಕರಾದ ಸುವಿತ್ ಶೆಟ್ಟಿ, ಸುಮಂತ್ ನೆರಿಯ, ಸನಲ್ ಶೆಟ್ಟಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ.