Home ಬ್ರೇಕಿಂಗ್‌ ನ್ಯೂಸ್ ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತ

ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತ

300
0

ಬೆಂಗಳೂರು; ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತವಾಗಿದೆ.

ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸ ಪ್ರಹ್ಲಾದ ಜೋಶಿ, ತುಮಕೂರು ಸಂಸದ ವಿ.ಸೋಮಣ್ಣ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಿತ್ರ ಪಕ್ಷವಾಗಿರುವ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ನಿರ್ಮಲಾ, ಜೋಶಿ, ಸೋಮಣ್ಣ ಮತ್ತು ಕುಮಾರಸ್ವಾಮಿ ಅವರಿಗೆ ಸಂಪುಟದರ್ಜೆ ಸ್ಥಾನಮಾನ ಹಾಗೂ ಶೋಭಾ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ಇಂದು ರಾತ್ರಿ ನಡೆಯಲಿರುವ ಸಮಾರಂಭದಲ್ಲಿ ಮೋದಿ ಅವರು (ರಾತ್ರಿ 7.15ಕ್ಕೆ) ಪ್ರಮಾಣ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here