Home ಬ್ರೇಕಿಂಗ್‌ ನ್ಯೂಸ್ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

106
0

ವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಇಂದು (ಜೂನ್ 9) ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.
ರಾಷ್ಟ್ರಪತಿ ಭವನದ ಆವರಣದಲ್ಲಿ ರಾತ್ರಿ 7.15ಕ್ಕೆ ನಡೆದ ಅದ್ದೂರಿ ಪ್ರಮಾಣವಚನ ಸಮಾರಂಭವನ್ನು ಸ್ಥಳದಲ್ಲಿದ್ದ ವಿದೇಶಿ ಗಣ್ಯರು, ಆಹ್ವಾನಿತರು ಸೇರಿ 8000ದಷ್ಟು ಅತಿಥಿಗಳೊಂದಿಗೆ ಜಗತ್ತು ಕಣ್ತುಂಬಿಕೊಂಡಿತು.

ಪ್ರಧಾನಿ ಮೋದಿ ಅವರು ಪ್ರಮಾಣ ಸ್ವೀಕರಿಸಿದ ಬಳಿಕ ರಾಜನಾಥ್ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್‌, ಮನೋಹರಲಾಲ್ ಖಟ್ಟರ್‌, ಎಚ್‌ ಡಿ ಕುಮಾರಸ್ವಾಮಿ, ಪಿಯೂಷ್ ಗೋಯೆಲ್‌, ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಜಿ, ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್), ಸರ್ಬಾನಂದ ಸೋನೋವಾಲ್‌, ಡಾ. ವೀರೇಂದ್ರ ಕುಮಾರ್, ರಾಮ್ ಮೋಹನ್ ನಾಯ್ಡು, ಪ್ರಲ್ಹಾದ್ ಜೋಶಿ, ಜುಯೆಲ್ ಓರಂ, ಗಿರಿರಾಜ್ ಸಿಂಗ್‌, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಭೂಪೇಂದ್ರ ಯಾದವ್, ಗಜೇಂದ್ರ ಸಿಂಗ್ ಶೇಖಾವತ್‌, ಅನ್ನಪೂರ್ಣಾ ದೇವಿ, ಕಿರಣ್‌ ರಿಜಿಜು ಅವರು ಪ್ರಮಾಣ ಸ್ವೀಕರಿಸಿದರು.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಇತರರು ಸೇರಿದಂತೆ ಭಾರತದ ನೆರೆಹೊರೆ ಮತ್ತು ಹಲವಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಮೋದಿ 3.0 ಸಚಿವ ಸಂಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ 63 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here