Home ಸ್ಥಳೀಯ ಸಮಾಚಾರ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಜೂ 21ರಂದು...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಜೂ 21ರಂದು ಉದ್ಘಾಟನೆ

196
0

ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ “ಉನ್ನತಿ” ಮತ್ತು ರೈತರ ಸಭಾ ಭವನದ ಉದ್ಘಾಟನಾ ಸಮಾರಂಭ ಜೂ.21ರಂದು ಕಲ್ಲೇರಿಯ ಸಂಘದ ವಠಾರ ನಡೆಯಲಿದೆ.

ನೂತನ ಕಟ್ಟಡವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ.

ರೈತ ಸಭಾ ಭವನ ಹಾಗೂ ಉಪಹಾರ ಭವನವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರು ಆದ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಪ್ರೀತಮ್ ಡಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ. ಲೋಕಸಭಾ ಸಂಸದ ಬ್ರೆಜೇಶ್ ಚೌಟ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಸಹಕಾರ ಸಂಘಗಳ ಉಪನಿಭಂದಕ ರಮೇಶ್ ಎಚ್‌.ಎನ್. ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರೀವೇಣಿ ರಾವ್, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತೀಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್, ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ., ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಸತೀಶ್ ಹೊಳ್ಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here