ಬೆಳ್ತಂಗಡಿ :
ಕಾಂಗ್ರೆಸ್ ನಾಯಕರ ದ್ವೇಷ ರಾಜಕೀಯದ ಫಲಶ್ರುತಿಯಾಗಿ ವಿವಿಧ ರೀತಿಯಲ್ಲಿ ಸುಳ್ಳು ಪ್ರಕರಣಗಳನ್ನು ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಿಸಿದ್ದು. ಈ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯಕ್ಕೆ ಸಂದ ಜಯವೆಂದು ಬೆಳ್ತಂಗಡಿ ಬಿಜೆಪಿ ಸಂತಸ ವ್ಯಕ್ತಪಡಿಸಿದ್ದಾರೆ.
ವಿಕಸಿತ ಭಾರತದ ಕಲ್ಪನೆಯಡಿ ಬಿಜೆಪಿ ರಾಷ್ಟ್ರವ್ಯಾಪಿ ಅಭಿವೃದ್ಧಿಯ ಪಣತೊಟ್ಟು ಕಾರ್ಯನಿರ್ವಹಿಸುತ್ತಿದ್ದು. ಹತಾಶೆಯಿಂದ ಸ್ಥಳೀಯ ಕಾಂಗ್ರೆಸ್ಸಿಗರು ವಿಕೃತ ಮನಸ್ಸಿನಿಂದ ಯುವ ನಾಯಕರನ್ನು , ಕಾರ್ಯಕರ್ತರನ್ನು ಹತ್ತಿಕ್ಕುವ ದುರುದ್ದೇಶದಿಂದ ಆಡಳಿತ ವ್ಯವಸ್ಥೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿದ್ದರೂ ಧರ್ಮದ ಈ ನಾಡಿನಲ್ಲಿ ಸತ್ಯ ಹೊರಬೀಳಲಿದೆ. ಬಿಜೆಪಿ ನ್ಯಾಯಾಲಯದ ಮೇಲೆ ವಿಶ್ವಾಸವಿರಿಸಿದ್ದು, ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರು ವಿಚಲಿತರಾಗದೆ, ಪ್ರಜಾಪ್ರಭುತ್ವ ವ್ಯವಸ್ಥೆಯಡಿ, ಕಾನೂನು ಚೌಕಟ್ಟಿನಲ್ಲಿ ಈ ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಜಯಗಳಿಸುವರೆಂಬ ವಿಶ್ವಾಸವನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸರಾವ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.