Home ಸಾಧಕರೊಂದಿಗೆ ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬೆಳ್ತಂಗಡಿ ಯ ಸಂದೇಶ್. ಎಸ್.ಜೈನ್ ಆಯ್ಕೆ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬೆಳ್ತಂಗಡಿ ಯ ಸಂದೇಶ್. ಎಸ್.ಜೈನ್ ಆಯ್ಕೆ

0

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ:1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version