Home ರಾಜಕೀಯ ಸಮಾಚಾರ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ವಿರೋಧಿಸಿ ಬಿಜೆಪಿಯಿಂದ ಜೂ.18 ರಂದು ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ವಿರೋಧಿಸಿ ಬಿಜೆಪಿಯಿಂದ ಜೂ.18 ರಂದು ಬೆಳ್ತಂಗಡಿಯಲ್ಲಿ ಪ್ರತಿಭಟನೆ

170
0

ಬೆಳ್ತಂಗಡಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ,ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜಮತಾ ಪಕ್ಷ ಬೆಳ್ತಂಗಡಿ ಮಂಡಲ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಜೂ 18ಮಂಗಳವಾರಬೆಳಿಗ್ಗೆ 10.00 ಗಂಟೆಗೆ ಬೆಳ್ತಂಗಡಿಯ ಸಂತೆಕಟ್ಟೆಯ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ . ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ‌ ಸೇರಿದಂತೆ ಹಿರಿಯ ಮುಖಂಡರುಗಳು ಭಾಗಬಹಿಸುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here