Home ಅಪರಾಧ ಲೋಕ ಇಂದಬೆಟ್ಟು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಇಂದಬೆಟ್ಟು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ

457
0

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ಜೂ 15 ರಂದು ನಡೆದಿದೆ.

ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ ಕಲ್ಲಾಜೆ ಸಮೀಪದ ವಿದ್ಯಾರ್ಥಿನಿ ಜಯಲಕ್ಷ್ಮಿ ತನ್ನ ತಾಯಿ ಅನಾರೋಗ್ಯದಿಂದ ಬಳಲುತಿದ್ದು ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೃತರ ಸಹೋದರ ನೀಡಿರುವ ದೂರಿನಂತೆ
ಬೆಳ್ತಂಗಡಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here