Home ಬ್ರೇಕಿಂಗ್‌ ನ್ಯೂಸ್ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ: ಪ್ರಿಯಾಂಕಾ ಗಾಂಧಿ ಕಣಕ್ಕೆ

ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ: ಪ್ರಿಯಾಂಕಾ ಗಾಂಧಿ ಕಣಕ್ಕೆ

0

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಲಿದ್ದು, ಪ್ರಿಯಾಂಕಾ ಗಾಂಧಿ ಈ ಕ್ಷೇತ್ರದಿಂದ ಚುನಾವಣೆಗೆ ಇಳಿಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version