ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಂಪದಕೋಡಿಯ ಮರುವದಡಿ ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿ ವಸಂತ ಪೂಜಾರಿ (50) ಎಂಬಾತನಾಗಿದ್ದಾನೆ. ಉಷಾ (40) ಎಂಬ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಸಂತ ಪೂಜಾರಿ ಎಂಬವರು ಉಷಾರವರಿಗೆ ಚಿಕ್ಕಪ್ಪ ಆಗಿದ್ದು ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಗೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಗಾಯಾಳು ಉಷಾ ಬೆಳ್ತಂಗಡಿ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ವಸಂತ ಪೂಜಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.