ಬೆಳ್ತಂಗಡಿ; ನಗರದ ಸುದೆಮುಗೇರುವಿನಲ್ಲಿ ನಡೆಯುತಗತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕ ಚಂದ್ರಶೆಖರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು ಸ್ಥಳದಲ್ಲಿ ಜುಗಾರಿಯಲ್ಲಿ ತೊಡಗಿದ್ದ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ 11,730 ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ
ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ