ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿಚಾರಿಸಿದರು.
ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದು ರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ದಸಂಸ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ , ಧೈರ್ಯ ತುಂಬಿದರು. ಕಾಂಗ್ರೆಸ್ ಪಕ್ಷ ಚಂದುರವರ ಇಡೀ ಕುಟುಂಬದ ಜೊತೆಗೆ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ , ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಉಪಸ್ಥಿತರಿದ್ದರು.