ಬೆಳ್ತಂಗಡಿ; ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಜರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯ ಹಿಂಭಾಗದಲ್ಲಿ ಭೂ ಕುಸಿತವಾಗಿದ್ದು ಶಾಲಾಕಟ್ಟಡಕ್ಕೆ ಅಪಾಯವಾಗದಂತೆ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೋಚ್ಚ, ಬೆಳ್ತಂಗಡಿ ಪಟ್ಟಣಪಂಚಾಯತು ಸದಸ್ಯ ಜಯಾನಂದ ಗೌಡ ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು