Home ಸ್ಥಳೀಯ ಸಮಾಚಾರ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಉದ್ಘಾಟನೆ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಉದ್ಘಾಟನೆ

0

ಧರ್ಮಸ್ಥಳ: ಸಹಕಾರಿ ಕ್ಷೇತ್ರ ಬಲಿಷ್ಠವಾದಾಗ ಗ್ರಾಮೀಣ ಪ್ರದೇಶದ ಜನರೂ ಆರ್ಥಿಕ ವಾಗಿ ಸಬಲರಾಗಲು ಸಾಧ್ಯವಿದೆ ಜನರೂ ಸಹಕಾರಿ ಸಂಘಗಳೊಂದಿಗೆ ಸೇರಿ ಸಂಸ್ಥೆಯ ಯಶಸ್ವಿಗೆ ಸಹಕರಿಸಬೇಕು ಎಂದು‌ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು
ಅವರು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಹಕಾರಿ ರಂಗ ಗಟ್ಟಿಯಾಗಬೇಕು ಮತ್ತು ಬಲಿಷ್ಠವಾಗಬೇಕು.
ಧರ್ಮಸ್ಥಳ ಕ್ಷೇತ್ರದಲ್ಲಿರುವ ಸಂಸ್ಥೆ ಒಳ್ಳೆಯ ರೀತಿಯಲ್ಲಿ ನಡೆದು ಸರ್ವಾಂಗೀಣ ಪ್ರಗತಿ ಸಾಧಿಸಿದೆ. ಸಹಕಾರಿ ರಂಗ ಮತ್ತು ಧರ್ಮಸ್ಥಳದ ಸ್ವಸಹಾಯ ಸಂಘಗಳು ಜೊತೆ ಜೊತೆಯಾಗಿ ನಡೆಯುತ್ತಿದೆ ಎಂದರು.

ರೈತ ಸಭಾ ಭವನ ಹಾಗೂ ಊಟದ ಸಭಾಂಗಣ ಉದ್ಘಾಟನೆಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ನೆರವೇರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ. ವಹಿಸಿದರು.

ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್‌ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ. ವಿ ಪ್ರತೀಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಧರ್ಮಸ್ಥಳ ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್. ಸತೀಶ್ ಹೊಳ್ಳ,ಉಪಾಧ್ಯಕ್ಷ ಅಜಿತ್ ಕುಮಾ‌ರ್ ಜೈನ್,ನಿರ್ದೇಶಕರಾದ ಶಾಂಭವಿ ರೈನೀಲಾಧರ ಶೆಟ್ಟಿ, ಶೀನ,ಚಂದ್ರಶೇಖರ,ಉಮಾನಾಥ,ಪ್ರಭಾಕರ ಗೌಡ ಬೊಳ್ಯವಿಕ್ರಮ್,ಧನಲಕ್ಷ್ಮೀಪ್ರಸನ್ನ ಹೆಬ್ಬಾರ್,ತಂಗಚ್ಚನ್ ಎನ್.ಪಿ.ಡಿ.ಸಿ.ಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳನ್ನು, ನಿವೃತ್ತ ಕಾರ್ಯ ನಿರ್ವಹಣಾಧಿಕರಿಗಳನ್ನು ಹಾಗೂ ಅತ್ಯುತ್ತಮ ಸಾಧನೆ ಮಾಡಿದ ನವೋದಯ ಸ್ವಸಹಾಯ ಸಂಘಗಳನ್ನು ಸನ್ಮಾನಿಸಲಾಯಿತು.
ಪ್ರಾಪ್ತಿ ಶೆಟ್ಟಿ ವಂಶಿಕ ಇವರು ಪ್ರಾರ್ಥಿಸಿದರು. ಕಟ್ಟಡ ಸಮಿತಿ ಸದಸ್ಯರು, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಸ್ವಾಗತಿಸಿದರು. ಲೋಕೇಶ್ ಶೆಟ್ಟಿ ಮತ್ತು ಮಹಾವೀ‌ರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version