Home ಸ್ಥಳೀಯ ಸಮಾಚಾರ ಕೆಸರು ನೀರಿನಿಂದ ತುಂಬಿದ ಹೆದ್ದಾರಿಯಲ್ಲಿ ಪ್ರಯಾಣಿಕರ ಸಂಕಟ; ಉಜಿರೆಯಲ್ಲಿ ರಸ್ತೆಯಲ್ಲಿ ಕುಳಿತು ಪ್ರವೀಣ್ ಅವರಿಂದ ಪ್ರತಿಭಟನೆ

ಕೆಸರು ನೀರಿನಿಂದ ತುಂಬಿದ ಹೆದ್ದಾರಿಯಲ್ಲಿ ಪ್ರಯಾಣಿಕರ ಸಂಕಟ; ಉಜಿರೆಯಲ್ಲಿ ರಸ್ತೆಯಲ್ಲಿ ಕುಳಿತು ಪ್ರವೀಣ್ ಅವರಿಂದ ಪ್ರತಿಭಟನೆ

0

ಬೆಳ್ತಂಗಡಿ; ಪೂಂಜಾಲಕಟ್ಟೆ ಯಿಂದ ಚಾರ್ಮಾಡಿವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಬೆಳ್ತಂಗಡಿಯಿಂದ ಮುಂಡಾಜೆಯವರೆಗೆ ಸಂಪೂರ್ಣ ರಸ್ತೆ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು ಅಪಘಾತಗಳಿಗೆ ಕಾರಣವಾಗುತ್ತಿದೆ. ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್ ಮಾಲಕ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಅವರು ಏಕಾಂಗಿಯಾಗಿ ಭಾನುವಾರ ಉಜಿರೆಯಲ್ಲಿ ರಸ್ತೆಯ ಕೆಸರಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಅವರ ಪ್ರತಿಭಟನೆಯೊಂದಿಗೆ ಸಾರ್ವಜನಿಕರು ಕೈಜೋಡಿಸಿದರು.

ರಸ್ತೆ ಅಗಲೀಕರಣ ಕಾಮಗಾರಿಯಿಂದ ಉಜಿರೆಯಿಂದ ಮುಂಡಾಜೆ ಸಾಗುವ ರಸ್ತೆ ಬೆಳ್ತಂಗಡಿಯಿಂದ ಮುಂದಕ್ಕೆ ಕಾಶಿಬೆಟ್ಟು ಸಮೀಪ, ಮಡಂತ್ಯಾರಿಂದ ಮುಂದಕ್ಕೆ ಬರುವ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ಸ್ಥಿತಿಯಿಧ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಏರುಪೇರಾದರೂ ಬಿದ್ದು ಅನಾಹುತ ಸಂಭವಿಸುತ್ತಿದೆ. ಉಜಿರೆಯಲ್ಲಿ ರವಿವಾರ ಹೆದ್ದಾರಿ ಕೆಸರುಮಯವಾದ ಪರಿಣಾಮ ಎರಡು ಮೂರು ದ್ವಿಚಕ್ರ ಸವಾರರು ಅಪಾಘಾತಕ್ಕೀಡಾಗಿದ್ದಾರೆ ಇದನ್ನು ಗಮನಿಸಿದ ಪ್ರವೀಣ್ ಅವರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಕಳೆದ ವಾರ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಬಿಸಿರೋಡ್ ಬಿಂದ ಚಾರ್ಮಾಡಿ ವರೆಗೆ ರಸ್ತೆ ಸಮಸ್ಯೆ ಕುರಿತು ಪರಿಶೀಲಿಸಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ವಾರದೊಳಗೆ ಸಮಸ್ಯೆ ಬಗೆಹರಿಸಲು ಸೂಚಿಸಿದ್ದಾರೆ. ಆದರೆ ಬೇಕಾಬಿಟ್ಟಿ ಕಾಮಗಾರಿಯಿಂದ ಜಿಲ್ಲಾಧಿಕಾರಿಗಳ ಆಜ್ಞೆಗೂ ಕವಡೆ ಕಿಮ್ಮತ್ತಿಲ್ಲ ಎಂಬಂತಾಗಿದೆ ಇದರ ಬಗ್ಗೆ ತಕ್ಷಣ ಸೂಕ್ತ ಕ್ರಮ ವಹಿಸಬೇಕು. ಇಲ್ಲವೇ ನಿರಂತರ ಹೋರಾಟ ನಡೆಸುವುದಾಗಿ ಉಜಿರೆ ಹೋಟೆಲ್‌ ಮಾಲೀಕ ಪ್ರವೀಣ್ ಹಳ್ಳಿಮನೆ ಪ್ರವೀಣ್ ತಿಳಿಸಿದ್ದಾರೆ.

ನದಿಯಂತಾದ ರಸ್ತೆ;
ಒಂದೆಡೆ ಹೆದ್ದಾರಿಯಲ್ಲಿ ಕೆಸರು ತುಂಬಿ ವಾಹನ‌ಸವಾರರು ಪರದಾಡುತ್ತಿರದ್ದರೆ ಮತ್ತೊಂದೆಡೆ ಉಜಿರೆ ಪೇಟೆಯಲ್ಲಿ ಪೆಟ್ರೋಲ್ ಪಂಪ್ ನಿಂದ ಬೆನಕ ಆಸ್ಪತ್ರೆಯ ವರೆಗೆ ರಸ್ತೆ ನದಿಯಂತಾಗಿದೆ. ಚರಂಡಿ ನೀರು ನೇರವಾಗಿ ರಸ್ತೆಗೆ ನುಗ್ಗುತ್ತಿದ್ದು ರಸ್ತೆ ಕೆರೆಯಂತಾಗಿದೆ‌. ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಪಾದಾಚಾರಿಗಳಂತೂ ಸಂಚರಿಸಲು ಅಸಾಧ್ಯವಾದ ಸ್ಥಿತಿಯಿದೆ. ರಸ್ತೆಯ ನೀರು ನೇರವಾಗಿ ಅಂಗಡಿಗಳಿಗೆ ನುಗ್ಗುತ್ತಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version