ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.
ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.