ಉಜಿರೆ: ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಭಾನುವಾರ ಸಂಜೆ ಧರ್ಮಸ್ಥಳಕ್ಕೆ ಬಂದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪ ಸಿಂಹ ನಾಯಕ್ ಜೊತೆಗಿದ್ದರು.
ಭಾನುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಯಡಿಯೂರಪ್ಪ ಸೋಮವಾರ ಬೆಳಗ್ಗೆ ದೇವರ ದರ್ಶನ ಮಾಡಲಿದ್ದಾರೆ.