ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 27ಗುರುವಾರದಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 27 ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮಲ್ಕೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.