ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿಗಾಹುತಿಯಾದ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.