Home ಅಪಘಾತ ಮಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು‌ ರಿಕ್ಷಾ ಚಾಲಕರು ಮೃತ್ಯು

ಮಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು‌ ರಿಕ್ಷಾ ಚಾಲಕರು ಮೃತ್ಯು

1773
0

ಮಂಗಳೂರು, ಜೂ. 27. ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು, ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಛ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್‌ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ವೆನ್ಹಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

LEAVE A REPLY

Please enter your comment!
Please enter your name here