ಬೆಳ್ತಂಗಡಿ; ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಯಲ್ಲಿ 25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿದರು. ಕೂಡಲೇ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ. ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು
Home ರಾಜಕೀಯ ಸಮಾಚಾರ ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ 25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್...