ಬೆಳ್ತಂಗಡಿ; ಧರ್ಮಸ್ಥಳ -ಉಜಿರೆ ಕಾಲೇಜು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ. ಘಟನೆ ಜೂ.29 ರಂದು ಮುಂಜಾನೆ ನಡೆದಿದೆ, ಬೆಂಝ್ ಕಾರು ಡಿವೈಡರಿಗೆ ಹೊಡೆದ ಕಾರಣ ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕನ ಸ್ಥಿತಿ ಗಂಭೀರವಾಗಿದೆ.
ಗಾಯಾಳುವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಗಾಯಕೊಂಡ ವಾಹನ ಸವಾರರನ್ನು ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಎಂ. ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಗಾಯಾಳು ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.

