ಬೆಳ್ತಂಗಡಿ; ಉಜಿರೆಯಲ್ಲಿ ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೃತ ಯುವಕ ಬೆಳ್ತಂಗಡಿ ನಿವಾಸಿ ಉದ್ಯಮಿಯಾಗಿರುವ ಪ್ರಜ್ವಲ್ ನಾಯಕ್ ಎಂಬವರಾಗಿದ್ದಾರೆ.
ಅತಿಯಾದ ವೇಗದಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಡು ಡಿವೈಡರ್ ಗೆ ಡಿಕ್ಕಿಹೊಡೆದು ಮಗುಚಿ ಬಿದ್ದಿದೆ ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸ್ಥಳೀಯರು ಕೂಡಲೇ ಪ್ರಜ್ವಲ್ ಅನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತ ಪಟ್ಟಿದ್ದಾರೆ.