ಬೆಳ್ತಂಗಡಿ; ಶಿಬಾಜೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಸಾಂತ್ವನ ಹೇಳಿದರು. ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಆಧ್ಯಕ್ಷರಾದ ಹರೀಶ್ ಕೆ.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು