ಬೆಳ್ತಂಗಡಿ; ಉಜಿರೆಯಲ್ಲಿ ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಿಸಿಕ್ಯಾಮೆರಾ ದೃಶ್ಯಗಳು ಎಲ್ಲೆಡೆ ಹರಿದಾಡಲಾರಂಭಿಸಿದ ಬೆನ್ನಲ್ಲಿಯೇ ಹಲ್ಲೆ ನಡೆಸಿದ ಆರೋಪಿ ನವೀನ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲೆ ನಡೆಸಿದ ಆರೋಪಿ ನವೀನ್ ಕನ್ಯಾಡಿ ಮತ್ತು ಟೈಲರಿಂಗ್ ಅಂಗಡಿ ನಡೆಸುವ ಮಹಿಳೆಯ ನಡುವೆ ಕಳೆದ ಹಲವು ವರ್ಷಗಳಿಂದ ಪರಿಚಯವಿದೆ ಎನ್ನಲಾಗಿದ್ದು ಇವರ ನಡುವೆ ಹಣಕಾಸಿನ ವ್ಯವಹಾರವೂ ಇತ್ತು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಈತ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ . ಎರಡು ದಿನಗಳ ಹಿಂದೆ ಹಲ್ಲೆ ಪ್ರಕರಣ ನಡೆದಿದ್ದರೂ ಯುವತಿ ಯಾವುದೇ ದೂರನ್ನು ದಾಖಲಿಸಿರಲ್ಲಿ. ಇದಾದ ಬಳಿಕ ಹಲ್ಲೆಯ ದೃಶ್ಯಗಳು ಬಹಿರಂಗಗೊಂಡಿತ್ತು. ಇದೀಗ ಮಹಿಳೆ ಬೆಳ್ತಂಗಡಿ ಪೊಲೋಸರಿಗೆ ದೂರು ನೀಡಿದ್ದು ತನ್ನಿಂದ ಏಳು ಲಕ್ಷ ಹಣವನ್ನು ಪಡೆದು ನವೀನ್ ವಂಚಿಸಿದ್ದಾನೆ ಹಣ ಕೇಳಿದ್ದಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ನವೀನ್ ಕನ್ಯಾಡಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.