Home ಅಪರಾಧ ಲೋಕ ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು: ಬೆಳ್ತಂಗಡಿಯ ನೆರಿಯ...

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು: ಬೆಳ್ತಂಗಡಿಯ ನೆರಿಯ ನಿವಾಸಿ ಬಂಧನ

0

ಮಂಗಳೂರು; ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿದ್ದಾರೆ.
ಬೆಳ್ಳಾರೆಯಲ್ಲಿ ಮನೆಗೆ ನುಗ್ಗಿ ಸುಮಾರು ರೂ 1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000/- ಸೇರಿ ಒಟ್ಟು ರೂ 1,78,000/- ಮೌಲ್ಯದ ಮನೆಕಳ್ಳತನ ನಡೆದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ ಪೊಲೀಸರು ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿ ಆತನಿಂದ ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿರುತ್ತದೆ.

ಸದ್ರಿ ಪ್ರಕರಣದ ಪತ್ತೆಗಾಗಿ ಕಾರ್ಯದಲ್ಲಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್,ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಜಗದೀಶ್ ಎಂ ಮತ್ತು ಶ್ರೀ ರಾಜೇಂದ್ರ ರವರುಗಳ ಮಾರ್ಗದರ್ಶನದಲ್ಲಿ, ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ರವರ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆಯವರು ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತಾರೆ. ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ ಬಹುಮಾನ ಘೋಷಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version