ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ಕಾಲ ನಾನು ಮಾಡದ ತಪ್ಪಿಗೆ ಶಿಕ್ಷೆ ಅನುಭವಸಿದಂತಾಗಿದೆ. ಈ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿದರು.
ಅವರು ಜು.2 ರಂದು ಗುರುವಾಯನಕೆರೆ ನವಶಕ್ತಿ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಳೆದ 19 ವರ್ಷಗಳಿಂದ ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡಿರುವ ನನ್ನನ್ನು ಬಿಜೆಪಿ ಪಕ್ಷ ಗುರುತಿಸಿ ನನ್ನನ್ನು ಬಿಜೆಪಿ ಯುವ ಮೊರ್ಚಾದ ಅಧ್ಯಕ್ಷನ್ನಾಗಿ ಮಾಡಿದೆ. ಆದರೆ ಕಾಂಗ್ರೆಸಿನ ರಕ್ಷಿತ್ ಶಿವರಾಮ್ ನಾನೊಬ್ಬ ರೌಡಿ ಶೀಟರ್, ಹಪ್ತ ವಸೂಲಿಗ ಎಂದಿದ್ದಾರೆ. ರಕ್ಷಿತ್ ಶಿವರಾಮ್ ಮಾಡಿದ ಆರೋಪಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ನಾನೂ ತಪ್ಪು ಮಾಡಿದ್ದರೆ, ನನಗೆ ಶಿಕ್ಷೆಯಾಗಿಲಿ, ಇಲ್ಲದಿದ್ದರೆ ಆರೋಪ ಮಾಡಿದವರಿಗೆ ತಕ್ಕ ಶಿಕ್ಷೆ ಸಿಗಲಿ. ಜು.8 ರಂದು ಕಾರಣಿಕ ಶಕ್ತಿ ಮಾರಿಗುಡಿಯಲ್ಲಿ ನಾನು ಪ್ರಾರ್ಥನೆ ಸಲ್ಲಿಸಲಿದ್ದೇನೆ ಎಂದರು.
ಕಲ್ಲಿನ ಕೋರೆಯ ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿದೆ. ಪೋಲಿಸರು ರಾತ್ರಿ 11.45 ಕ್ಕೆ ಬಂದು ನನ್ನನ್ನು ವಿಚಾರಣೆಗಾಗಿ ಕರೆದುಕೊಂಡು ಹೋದರು. ಹೋಗುವಾಗ ನಾನು ಶಾಸಕರಿಗೆ ಕರೆ ಮಾಡಿ ಹೇಳಿದ್ದೇನೆ. ಪೋಲೀಸರಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಕಲ್ಲಿನ ಕೊರೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದರೂ. ಬಿಡಲಿಲ್ಲ ಆಲಬೇಕಾದರೆ ನನ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದರೂ ಕೇಳಲಿಲ್ಲ. ಕಾಂಗ್ರೇಸ್ ನವರು ಒತ್ತಡ ಹಾಕಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮೇಲೆ ಕೇಸು ಹಾಕಿ ಒಳಗಾಕುವ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಪೋಲೀಸರು ಪ್ರಭಾವಕ್ಕೆ ಒಳಗಾಗಿ ನನ್ನ ಹೆಸರು ಆರೋಪಿಗಳ ಪಟ್ಟಿಯಲ್ಲಿ ಸೇರಿಸಿದ್ದಾರೆ ಎಂದರು.
ವಸಂತ ಬಂಗೇರರು ಬೆಳ್ತಂಗಡಿಯಲ್ಲಿ ದ್ವೇಷ ರಾಜಕಾರಣ ಮಾಡಿದವರಲ್ಲ. ಏನಿದ್ರೂ ನೇರವಾಗಿ ಮಾತಾಡುತ್ತಿದ್ದರು. ಆದರೆ ರಕ್ಷಿತ್ ಶಿವರಾಮ್ ನನ್ನ ವಿರುದ್ದ ಸೇಡಿನ ರಾಜಕೀಯವಮಾಡುತ್ತಿದ್ದಾರೆ, ಯಾವುದೇ ಗಂಭೀರವಾದ ಪ್ರಕರಣಗಳು ಇಲ್ಲದಿದ್ದರೂ ನನ್ನ ವಿರುದ್ದ ರೌಡಿಶೀಟ್ ಹಾಕಲಾಗಿದೆ.ಇದು ಕಾರ್ಯಕರ್ತರನ್ನು ಬೆದರಿಸುವ ತಂತ್ರವಾಗಿದೆ ಎಂದರು.
ನಾನು ಇಲ್ಲೆ ಹುಟ್ಟಿ ಇಲ್ಲೆ ಬೆಳೆದವನು. ರಕ್ಷಿತ್ ಶಿವರಾಮ್ ಬೆಳ್ತಂಗಡಿಗೆ ಬಂದು ನಾಲ್ಕು ವರ್ಷಗಳಾಗಿವೆ. ಸುಖ ಸುಮ್ಮನೆ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳಾದ ಹರೀಶ್ ಗೌಡ ಸಂಭೋಳ್ಯ ಸ್ವಸ್ತಿಕ್ ಗೌಡ ಹಟ್ಟತ್ತೋಡಿ ಉಪಸ್ಥಿತರಿದ್ದರು.
