Home ಸ್ಥಳೀಯ ಸಮಾಚಾರ ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ

ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ

0


ಬೆಳ್ತಂಗಡಿ:ವಿಪರೀತ ಮಳೆಯ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ,ಬಂಡಾಜೆ,ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.
ಭಾರೀ ಮಳೆಯ ಹಿನ್ನಲೆಯಲ್ಲಿಗಡಾಯಿಕಲ್ಲಿಗೂ ಚಾರಣಕ್ಕೆ ತೆರಳುವುದು ಅಪಾಯಕಾರಿಯಾಗಿರುವ ಹಿನ್ನಲೆಯಲ್ಲಿ ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version