ಬೆಳ್ತಂಗಡಿ; ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಂಘದ ಕಾರ್ಯಚಟುವಟಿಕೆಗಳಿಗೆ ಉತ್ತೇಜಸಲು ಜಮೀನು ಮಂಜೂರುಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.
ಅದರಂತೆ ಇದೀಗ ಜಮೀನು ಮಂಜೂರು ಗೊಳಿಸಲಾಗಿದೆ