ಬೆಳ್ತಂಗಡಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ
ಮಳೆಯಾಗುತ್ತಿದ್ದುಜಿಲ್ಲೆಯ ಶಾಲೆಗಳಿಗೆ ಜು 9ರಂದು ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಜುಲೈ 09 ಮಂಗಳವಾರ ರಜೆ ಘೋಷಿಸಲಾಗಿದೆ.