ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ‘ಶ್ರೀ ಗುರು ಸಾನಿಧ್ಯ’ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಮತ್ತು ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
ಉದ್ಘಾಟನೆ ನೆರವೇರಿಸಿದ
ಬೆಂಗಳೂರು ಸೋಲೂರು ಮಠ ಆರ್ಯ ಈಡಿಗ ಸಂಸ್ಥಾನದ ಪೀಠಾಧಿಪತಿ ಶ್ರೀವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ
” ಕರಾವಳಿಯಲ್ಲಿ ಅತಿ ಹೆಚ್ಚು ಸಹಕಾರ ಸಂಘಗಳಿದ್ದು ಇನ್ನೊಬ್ಬರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂಬ ನಿಟ್ಟಿನಲ್ಲಿ ಅವೆಲ್ಲವೂ ಸೇವೆ ನೀಡುತ್ತಿವೆ” ಎಂದರು.
“ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಿಗದ ಸೇವೆ ಸಹಕಾರಿ ಸಂಘಗಳ ಮೂಲಕ ಸಿಗುತ್ತಿದ್ದು ಜನಸಾಮಾನ್ಯರಿಗೆ ಸರಳವಾಗಿ ತ್ವರಿತ ಅಗತ್ಯ ವ್ಯವಸ್ಥೆಗಳಾಗುತ್ತಿವೆ. ಕರ್ತವ್ಯ ನಿಷ್ಠೆಯ ಮೂಲಕ ವ್ಯವಹಾರ ನಡೆಸುತ್ತಿರುವ ಶ್ರೀ ಗುರುದೇವ ಸಹಕಾರ ಸಂಘ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದರು.
ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಡಳಿತ ಕಚೇರಿ ಉದ್ಘಾಟಿಸಿ ಮಾತನಾಡಿ “ವಾಣಿಜ್ಯ ಬ್ಯಾಂಕುಗಳಲ್ಲಿ ಸಂಕುಚಿತ ಮನೋಭಾವವಿದ್ದರೆ ಸಹಕಾರಿ ಸಂಘಗಳಲ್ಲಿ ವಿಕಸಿತ ಮನೋಭಾವವಿದ್ದು ಜನರ ನಾಡಿಮಿಡಿತಕ್ಕೆ ತಕ್ಕುದಾಗಿ ಕರ್ತವ್ಯ ನಿರ್ವಹಿಸುತ್ತಿವೆ ಎಂದರು.

ಭದ್ರತಾ ಕೊಠಡಿ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ ಶುಭ ಹಾರೈಸಿದರು.
ಸಭಾಭವನದ ಉದ್ಘಾಟನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ನೆರವೇರಿಸಿದರು.
ಸಂಘದ ಉಪಾಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು
ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ ಅಧ್ಯಕ್ಷ ಭಾಸ್ಕರ್ ಎಂ. ಪೆರುವಾಯಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ, ಸಂಘದ ಸಿಇಒ ಅಶ್ವತ್ಥ್ ಕುಮಾರ್, ನಿರ್ದೇಶಕರು ಉಪಸ್ಥಿತರಿದ್ದರು.
ನಿರ್ದೇಶಕ ಪಿ. ಧರಣೇಂದ್ರ ಕುಮಾರ್ ಸ್ವಾಗತಿಸಿದರು. ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು ವರದಿ ವಾಚಿಸಿದರು. ಪ್ರಜ್ಞಾ ಓಡಿಲ್ನಾಳ ಮತ್ತು ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
