Home ಸ್ಥಳೀಯ ಸಮಾಚಾರ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

0

ಬೆಳ್ತಂಗಡಿ : ‘ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳಿಗೆ ಸಿಗುವ ಜವಾಬ್ದಾರಿಯ ಅವಕಾಶ. ಅದನ್ನು ಉತ್ತಮವಾಗಿ ಬಳಸಿಕೊಂಡು ವಿದ್ಯಾಸಂಸ್ಥೆಯನ್ನು ಬೆಳಗಿಸುವ ಪಣತೊಡಬೇಕು. ವಿದ್ಯಾರ್ಜನೆ ಜತೆ ತಾನು ಹಮ್ಮಿಕೊಳ್ಳುವ ಉತ್ತಮ ಚಟುವಟಿಕೆಗಳು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು’ ಎಂದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು

ಅವರು ಶುಕ್ರವಾರ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ 2024 ನೇ ಸಾಲಿಗೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಅವಕಾಶವನ್ನು ಪಡೆದುಕೊಳ್ಳಲು ಆಂತರಿಕ ಮನಸ್ಸು ಸಿದ್ಧವಾಗಿರಬೇಕು. ಒಳ್ಳೆಯ ವಿಚಾರಗಳನ್ನು ಹೆಚ್ಚು ಹೆಚ್ಚು ಹಂಚಿಕೊಂಡಷ್ಟು ಅದು ಮತ್ತೆ ನಮ್ಮಲ್ಲಿ ಉತ್ಪತ್ತಿಯಾಗುತ್ತದೆ. ನಾಳೆಯ ಸಮಾಜದಲ್ಲಿ ನಮಗೆ ಯಶಸ್ಸು ಸಿಗುವುದು ನಮ್ಮ ಒಳ್ಳೆಯ ಗುಣದಿಂದ ಹೊರತು ಹಣದಿಂದಲ್ಲ. ಯಶಸ್ಸಿನೆಡೆಗೆ ಸಾಗುವ ಗುಣ ಸಂಪಾದನೆಯೇ ನಮ್ಮ ಆದ್ಯತೆಯಾಗಬೇಕು’ ಎಂದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಬಿನುತ ಬಂಗೇರ ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತೆಶ್ , ಕಾರ್ಯದರ್ಶಿ ದ್ವಿತೀಯ ವಾಣಿಜ್ಯ ‘ಬಿ’ ವಿಭಾಗದ ಸ್ವಾತಿ , ಪ್ರಥಮ ಪಿಯುಸಿ ವಿದ್ಯಾರ್ಥಿಳಾದ ಪ್ರಥಮ ವಿಜ್ಞಾನ ವಿಭಾಗದ ದೀಪಕ್, ಪ್ರಥಮ ವಾಣಿಜ್ಯ ವಿಭಾಗದ ಖುಷಿ ಅನಿಸಿಕೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದ್ವಿತೀಯ ಕಲಾ ವಿಭಾಗದ ಕಿಶನ್ ಹಾಗೂ ಜತೆ ಕಾರ್ಯದರ್ಶಿ ದ್ವಿತೀಯ ವಾಣಿಜ್ಯ ‘ಎ’ ವಿಭಾಗದ ರಾಫಿಯಾ ಇದ್ದರು.

ಹೊಸದಾಗಿ ಕಾಲೇಜಿಗೆ ಸೇರ್ಪಡೆಗೊಂಡ ಉಪನ್ಯಾಸಕರನ್ನು, , ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಶಮೀವುಲ್ಲಾ ಬಿ.ಎ. ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ಗಣೇಶ್ ಶಿರ್ಲಾಲು ಪರಿಚಯಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ, ಕನ್ನಡ ವಿಭಾಗದ ಉಪನ್ಯಾಸಕ ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ವಂದಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version