Home ಬ್ರೇಕಿಂಗ್‌ ನ್ಯೂಸ್ ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

0

ಮಂಗಳೂರು; ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ.

ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಆದರೆ ಪ್ರತಿದಿನವೂ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಡಿಸಿ ಅವರ ನಕಲಿ ಆದೇಶ ಪ್ರತಿ ರವಾನೆಯಾಗುತ್ತದೆ. ಇದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಚಟುವಟಿಕೆಗಳನ್ನು ತಡೆಯಲು ರಜೆಯ ಬಗ್ಗೆ ಸುಳ್ಳು ಸುದ್ದಿಯನ್ನು ಹರಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿರುವುದಾಗಿ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version