ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳ ಶಾಲೆಗಳಿಗೆ ಜು.18ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರೆ.
ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ.
ಬುಧವಾರ ಸಂಜೆಯ ವೇಳೆ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾದ ಹಿನ್ನಲೆಯಲ್ಲಿ ರಜೆ ನೀಡದಿರಲು ನಿರ್ಧರಿಸಲಾಗಿತ್ತು ಈ ಗುರುವಾರದಿಂದ ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಲಿದೆ ಎಂದಿದ್ದರು ಈ ತಾಲೂಕುಗಳಲ್ಲಿ ಭರೀ ಮಳೆ ಮುಂದುವರಿಯುತ್ತಿರುವ ಕಾರಣ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ