Home ಬ್ರೇಕಿಂಗ್‌ ನ್ಯೂಸ್ ಉಕ್ಕಿ ಹರಿದ ಕಪಲಾ ನದಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

ಉಕ್ಕಿ ಹರಿದ ಕಪಲಾ ನದಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

323
0

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ ದೇವಸ್ಥಾನಕ್ಕೆ ನುಗ್ಗಿದ ನೀರು
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಮದ್ಯಾಹ್ನದಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ನೀರು‌ಸರಾಗವಾಗಿ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

LEAVE A REPLY

Please enter your comment!
Please enter your name here